ಬೆಂಗಳೂರು:
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು. ಈ ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶಗಳನ್ನು ಪತ್ರಿಕಾಗೋಷ್ಠಿಯಲ್ಲಿ ಕೆಎಸ್‌ಇಇಬಿ ಅಧ್ಯಕ್ಷರಾದ ರಾಮಚಂದ್ರನ್ ಪ್ರಕಟಿಸಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು – karresults.nic.in
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ 2ನೇ ಸ್ಥಾನ ಲಭಿಸಿದೆ. ಕೊಡಗು 3, ಉತ್ತರ ಕನ್ನಡ 4, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.