ಪ್ರಚೋದನೆ ಬೇಡ; ತೆಪ್ಪಗಿರಿ: ಅಮಿತ್‌ ಶಾ

Advertisement

ನವದೆಹಲಿ: ಗಡಿ ವಿವಾದ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದು, ಸುಪ್ರೀಂಕೋರ್ಟ್ ಆದೇಶ ಬರುವವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಗಡಿ ಸಮಸ್ಯೆ ಬಗೆಹರಿಸಲು ತಟಸ್ಥ ಸಮಿತಿ ರಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಂಸತ್ ಭವನದ ಲೈಬ್ರರಿ ಕಟ್ಟಡದಲ್ಲಿ ಮಹಾರಾಷ್ಟ್ರ, ಕರ್ನಾಟಕ ಮುಖ್ಯಮಂತ್ರಿಗಳ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ಎರಡೂ ರಾಜ್ಯಗಳು ರಾಜಕೀಯ ಚರ್ಚಾ ವಿಷಯವನ್ನಾಗಿ ಮಾಡಬಾರದು. ಗಡಿಯಲ್ಲಿ ಶಾಂತಿ ಸ್ಥಾಪಿಸಬೇಕಿದೆ. ಗಡಿ ವಿವಾದವನ್ನು ರಸ್ತೆಯಲ್ಲಿ ಪರಿಹರಿಸಿಕೊಳ್ಳಲು ಬರುವುದಿಲ್ಲ. ಗಡಿ ಸಮಸ್ಯೆ ಬಗೆಹರಿಸಲು ತಟಸ್ಥ ಸಮಿತಿಯನ್ನು ರಚಿಸಲಾಗುವುದು. ಸಮಿತಿಯಲ್ಲಿ ಎರಡು ರಾಜ್ಯಗಳ ಮಂತ್ರಿಗಳು ಇರಲಿದ್ದು, ಪ್ರಯಾಣಿಕರಿಗೆ, ವ್ಯಾಪಾರಿಗಳಿಗೆ ಯಾವುದೇ ತೊಂದರೆ ಆಗಬಾರದು. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಕುರಿತು ಮಹಾರಾಷ್ಟ್ರ, ಕರ್ನಾಟಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದೆ. ಗಡಿ ವಿವಾದ ಸಂಬಂಧ ಸುಪ್ರೀಂಕೋರ್ಟ್​ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಸಿಎಂಗಳಾದ ಬೊಮ್ಮಾಯಿ, ಏಕನಾಥ್ ಶಿಂಧೆ ಜತೆ ಸುದೀರ್ಘ ಚರ್ಚೆ ಮಾಡಿದ್ದೇವೆ ಎಂದರು.