ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೂನ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅತ್ಯಾಚಾರ ಕೇಸ್ನಲ್ಲಿ ಪ್ರಜ್ವಲ್ ರೇವಣ್ಣಗೆ ಜೈಲು ಶಿಕ್ಷೆ ವಿಧಿಸಿ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಎಸ್ಐಟಿ ವಶದಲ್ಲಿದ್ದ ಪ್ರಜ್ವಲ್ ರೇವಣ್ಣ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಕೋರ್ಟ್ಗೆ ಹಾಜರು ಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರಜ್ವಲ್ ರೇವಣ್ಣನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಆದೇಶಿಸಿದ್ದಾರೆ.