ಬೆಳಗಾವಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು, ಸಚಿವ ಶಿವರಾಮ ಹೆಬ್ಬಾರ ಜೊತೆಗಿನ ಸಂಧಾನ ಮಾತುಕತೆ ವಿಫಲವಾಗಿದೆ. ನಂತರ ಸಚಿವ ಹೆಬ್ಬಾರ ಸುವರ್ಣಸೌಧದತ್ತ ಹೆಜ್ಜೆ ಹಾಕಿದರು.
ಈ ಮಧ್ಯೆ, ಸ್ಥಳಕ್ಕೆ ಸಿಎಂ ಬರಲೇಬೇಕೆಂದು ಪ್ರತಿಭಟನಾ ನಿರತ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ. ಇಲ್ಲದಿದ್ರೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕೋ ಎಚ್ಚರಿಕೆ ನೀಡಿದ್ದಾರೆ. ಕೊನೆಯ ಹಂತದ ಸಂಧಾನಕ್ಕೆ ಪೊಲೀಸರು ಮುಂದಾಗಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.