ಬೆಳಗಾವಿ: ಅಂಗನವಾಡಿ, ಮಿನಿ ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೊಸ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.
ಖಾನಾಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಅಂಗನವಾಡಿ, ಆಶಾ, ಮಧ್ಯಾಹ್ನ ಬಿಸಿಯೂಟ ಕಾರ್ಯಕರ್ತರೆಯರಿಗೆ ವೇತನ ಹೆಚ್ಚಳದ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ರೂ., ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ರೂ., ಹಾಗೂ ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ., ಬಿಸಿಯೂಟ ಕಾರ್ಯಕರ್ತೆಯರಿಗೆ 5 ಸಾವಿರ ರೂ. ವೇತನ ಹೆಚ್ಚಳ ಮಾಡುವುದಾಗಿ ಅವರು ಘೋಷಿಸಿದ್ದಾರೆ. ಜತೆಗೆ ನಿವೃತ್ತಿ ಹೊಂದಿದವರಿಗೆ, ಮೃತಪಟ್ಟ ಕಾರ್ಯಕರ್ತೆಯರಿಗೆ ವಿಶೇಷ ಪರಿಹಾರ ಧನ ನೀಡುವ ಭರವಸೆ ನೀಡಿದ್ದಾರೆ.