ಬಂಧಿಸುವುದರ ಹಿಂದಿನ ಉದ್ದೇಶ ಏನು?

Advertisement

ಬೆಂಗಳೂರು: ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು? ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿ ಪ್ರಕರಣ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್‌ ಮಾಡಿರುವ ಅವರು ರಾಮಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹುಬ್ಬಳ್ಳಿಯ ಹಿಂದೂ ಕರಸೇವಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ.
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಆಗುತ್ತಿರುವಂತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ. ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು? ಇಡೀ ದೇಶವೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ಕೊಡುತ್ತಿರುವ ಸಂದರ್ಭದಲ್ಲಿ ಈ ರೀತಿ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವವರೇ ಕಾನೂನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಇದು ಸ್ಪಷ್ಪ ನಿದರ್ಶನ. ಈಗಾಗಲೇ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ ಪ್ರತಿಪಕ್ಷದ ಸ್ಥಾನವೂ ಇಲ್ಲದಂತಾಗಿದೆ. ಈ ರೀತಿಯ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿಯೂ ಕಾಂಗ್ರೆಸ್ ಅಂತ್ಯ ಕಾಣುವುದೂ ನಿಶ್ಚಿತ ಎಂದಿದ್ದಾರೆ.