ಬಹುನಿರೀಕ್ಷಿತ ಮಧ್ಯಂತರ ಬಜೆಟ್

Advertisement

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.
ಪ್ರಧಾನಿ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್‌ ಕೂಡ ಇದಾಗಿದ್ದು. ಹಣಕಾಸು ಸಚಿವರಾಗಿ ಸೀತಾರಾಮನ್‌ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಬಜೆಟ್‌ಗೆ ಮೋದಿ ಸಂಪುಟದ ಒಪ್ಪಿಗೆ ಸಿಕ್ಕಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 11 ಗಂಟೆಗೆ ಸಂಸತ್ತಿನಲ್ಲಿ ಬಜೆಟ್ ಮಂಡಿಸಲಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಕಾಗದ ರಹಿತ ಬಜೆಟ್​ ಇದಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಾಜ್ಯ ಸಚಿವರಾದ ಡಾ.ಭಾಗವತ್ ಕಿಶನ್ರಾವ್ ಕರಡ್ ಮತ್ತು ಪಂಕಜ್ ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಕೇಂದ್ರ ಬಜೆಟ್ ಮಂಡಿಸುವ ಮೊದಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು. ಈ ಸಮಯದಲ್ಲಿ ರಾಷ್ಟ್ರಪರಿ ದ್ರೌಪದಿ ಮುರ್ಮು ಅವರು ನಿರ್ಮಲಾ ಸೀತಾರಾಮನ್​​​ಗೆ ಸಿಹಿ ತಿನ್ನಿಸಿದರು.