ಬಾಗಲಕೋಟೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹೊರ ಗುತ್ತಿಗೆ ನೌಕರರಿಂದ ಮಂಗಳವಾರ ರಾತ್ರಿ ಧರಣಿ ಆರಂಭಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಕನಿಷ್ಠ ವೇತನ ಜಾರಿ & ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಯನ್ನು ನವನಗರದ ಡಿ.ದೇವರಾಜ್ ಅರಸು ಭವನದ ಬಳಿ ನಡೆಸಿದ್ದು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.