ನವದೆಹಲಿ: ಭಾರತ ಕ್ರಿಕೆಟ್ ತಂಡ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನಾಡಲು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ 2024–25ನೇ ಸಾಲಿನ ಬಾರ್ಡರ್ ಗಾವಸ್ಕರ್ ಟ್ರೋಫಿಯ ಸರಣಿಯ ವೇಳಾಪಟ್ಟಿಯನ್ನು ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದ್ದು, ಬರೋಬ್ಬರಿ ಮೂರು ದಶಕಗಳ ಬಳಿಕ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು 5 ಪಂದ್ಯಗಳ ಟೆಸ್ಟ್ ಸರಣಿಯನ್ಣಾಡಲಿವೆ. 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ನವೆಂಬರ್ 22ರಂದು ಪರ್ತ್‌ನಲ್ಲಿ ಆರಂಭವಾಗಲಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು 1991-92ರಲ್ಲಿ ಕೊನೆಯ ಬಾರಿಗೆ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನಾಡಿದ್ದವು.