ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ಸಿಗೆ ಸೇರಿದ ಮುಖಂಡರು

Advertisement

ಕುಷ್ಟಗಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಮುಖಂಡರುಗಳು ಪಕ್ಷಾಂತರ ಪರ್ವ ನಡೆಸಿದ್ದಾರೆ.ಇದಕ್ಕೆ ತಾಜಾ ಉದಾಹರಣೆ ಎನ್ನುವಂತೆ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು ಸೇರ್ಪಡೆಗೊಂಡರೆ.ಇನ್ನೊಂದು ಕಡೆ ಬಿಜೆಪಿಯ ಪ್ರಮುಖರು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಸಮ್ಮುಖದಲ್ಲಿ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ.
ಮಾಜಿ ಜಿಪಂ ಸದಸ್ಯ ಹಾಗೂ ಲಂಬಾಣಿ ಸಮಾಜದ ಬಿಜೆಪಿ ಪಕ್ಷದ ಪ್ರಬಲ ಮುಖಂಡ ಪ್ರಕಾಶ್ ರಾಠೋಡ್ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷದ ಗೂಡಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಪ್ರಕಾಶ್ ರಾಠೋಡ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪರವರು ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರ ಜನಪರ ಕಾರ್ಯಗಳನ್ನು ಮೆಚ್ಚಿಕೊಂಡು ನಾನು ಬಿಜೆಪಿ ಪಕ್ಷ ನೂ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ. ಬಿಜೆಪಿ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದ್ದು ನಿಷ್ಠಾವಂತ ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಬೆಲೆ ಇಲ್ಲದಂತಾಗಿದೆ. ಇದರಿಂದಾಗಿ ನಾನು ಬಿಜೆಪಿ ಪಕ್ಷವನ್ನು ತೊರೆಯಬೇಕಾಯಿತು ಎಂದರು.
ಬಯ್ಯಾಪುರ ಇತಿಹಾಸ ನಿರ್ಮಿಸುತ್ತಾರೆ: ಸತತವಾಗಿ 2 ಬಾರಿ ಶಾಸಕರಾಗಿ ಆಯ್ಕೆಯಾದ ಇತಿಹಾಸ ಇರುವುದಿಲ್ಲ. ಆದರೆ ಪ್ರಸಕ್ತ ಸಾಲಿನ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಬಯ್ಯಾಪುರ ಮತ್ತೊಮ್ಮೆ ಶಾಸಕರಾಗಿ ಆಯ್ಕೆ ಆಗುವ ಮೂಲಕ ವಿಧಾನಸಭಾ ಕ್ಷೇತ್ರದಲ್ಲಿ ಇತಿಹಾಸ ನಿರ್ಮಾಣ ಮಾಡಲಿದ್ದಾರೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಮಾತನಾಡಿ, ಶಾಸಕ ಬಯ್ಯಾಪುರ ಅಭಿವೃದ್ಧಿಯ ಹರಿಕಾರ ಎಂಬ ಬಿರುದು ಪಡೆದುಕೊಂಡಿದ್ದು ವಿರೋಧ ಪಕ್ಷದಲ್ಲಿ ಇದ್ದುಕೊಂಡು ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಜಾತಿ, ಭೇದ ಮರೆತು ಎಲ್ಲಾ ವರ್ಗದವರನ್ನು ಪ್ರೀತಿ ವಿಶ್ವಾಸದ ಮೂಲಕ ಕರೆದುಕೊಂಡು ಹೋಗುವಂತಹ ವ್ಯಕ್ತಿಯಾಗಿದ್ದಾರೆ.ನೇರ ನಿಷ್ಠುರವಾಗಿ ಕ್ಷೇತ್ರದ ಜನತೆಯ ಮನಸ್ಸನ್ನು ಗೆದ್ದಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಅವರನ್ನು ಮತ್ತೊಮ್ಮೆ ಜವಾಬ್ದಾರಿ ನಿಮ್ಮೆಲ್ಲರ ಮೇಲೆ ಇದೆ ಎಂದರು.
ಕಾಂಗ್ರೆಸ್ ಗೆ ಸೇರಿದ ಮುಖಂಡರು:ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಪ್ರಕಾಶ್ ರಾಠೋಡ್,ಮುತ್ತು ಲಿಂಬಣ್ಣ ಚೌವ್ಹಾಣ, ಮಾಂತೇಶ ಗಾಣಿಗೇರ, ಹನುಮಪ್ಪ ನೀಲೋಗಲ,ಅಶೋಕ್ ಚಳಗೇರಿ, ಶರಣಪ್ಪ ಚೌವ್ಹಾಣ ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.