ಬಿಜೆಪಿಯ ಮತ್ತೋರ್ವ ನಾಯಕ ರಾಜೀನಾಮೆ

Advertisement

ಬಿಜೆಪಿಗೆ ರಾಜೀನಾಮೆ ನೀಡುತ್ತೇನೆ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿಂದು ಬೆಳ್ಳಂಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ. ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಅಲ್ಲದೇ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಶಿವಮೊಗ್ಗ ಕ್ಷೇತ್ರಕ್ಕೆ ಇನ್ನೂ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಆದರೂ ಟಿಕೆಟ್​ ಸಿಗುವುದು ಖಾತ್ರಿ ಇಲ್ಲದಿರುವುದರಿಂದ ರಾಜೀನಾಮೆ ಘೋಷಿಸಿದ್ದಾರೆ.