ಬಿಜೆಪಿಯ ಹಿರಿಯ ನಾಯಕ  ಸುಶೀಲ್  ಮೋದಿ ನಿಧನ

Advertisement

ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸಂಸದ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ(72) ಅವರು ಇಂದು ಸಂಜೆ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಬಿಹಾರದ ಮೂರನೇ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರೂ ಆಗಿ ಸೇವೆ ಸಲ್ಲಿಸಿರುವ ಅವರು ಅನಾರೋಗ್ಯದ ದೃಷ್ಟಿಯಿಂದ ಅವರು ರಾಜಕೀಯದಿಂದ ದೂರ ಉಳಿದಿದ್ದರು.ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಫರ್ಧೆಯಿಂದ ಹಿಂದೆ ಸರಿದಿದ್ದರು.