ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ಬಿಟ್ಟವರ ವಿರುದ್ಧ ಕ್ರಮ: ಅರುಣ ಸಿಂಗ್‌

arun singh
Advertisement

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪಟ್ಟಿಯನ್ನು ಹರಿಬಿಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಕುರಿತು ಈಗಾಗಲೇ ಸಭೆ ನಡೆಸುತ್ತಿದ್ದೇವೆ. ಬಳಿಕ ಈ ಪಟ್ಟಿಯನ್ನು ಕೇಂದ್ರ ಸಮಿತಿ ಸಂಸದೀಯ ಮಂಡಳಿ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪಟ್ಟಿ ನಕಲಿಯಾಗಿದೆ. ಇಂತಹ ಸುಳ್ಳು ಸುದ್ದಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.