ನಾನು ಯುಪಿಎ ಸರ್ಕಾರದ ಅವಧಿಯಲ್ಲಿ ಪದ್ಮ ಪ್ರಶಸ್ತಿಯನ್ನು ನಿರೀಕ್ಷಿಸುತ್ತಿದ್ದೆ. ಆದರೆ ನನಗೆ ಸಿಕ್ಕಿರಲಿಲ್ಲ. ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ನನಗೆ ಪ್ರಶಸ್ತಿ ದೊರೆಯುವುದಿಲ್ಲ ಎಂದು ಭಾವಿಸಿದ್ದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕರ್ನಾಟಕದ ಬೀದರ್‌ನ ಬಿದರಿ ಕಲಾವಿದ ಷಾ ರಶೀದ್ ಅಹ್ಮದ್ ಖಾದ್ರಿ ಹೇಳಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಬುಧವಾರ ಸಂಜೆ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಲು ಬಂದಾಗ ಅವರೊಂದಿಗೆ ಷಾ ರಶೀದ್ ಅಹ್ಮದ್ ಖಾದ್ರಿ ಅವರು ಮಾತನಾಡಿ, ʻಬಿಜೆಪಿ ಪ್ರಶಸ್ತಿ ನೀಡುವುದಿಲ್ಲ ಎಂಬ ನನ್ನ ಊಹೆಯನ್ನು ನೀವು ಸುಳ್ಳಾಗಿಸಿದ್ದೀರಿ. ನಿಮಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ’ ಎಂದು ಹೇಳಿದ್ದಾರೆ.
ಈ ಇಬ್ಬರು ನಡೆಸಿದ ಮಾತುಕತೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.