ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದ ಕರಡಿ ಸಂಗಣ್ಣ

Advertisement

ಎರಡು ಜಿಲ್ಲೆಗಳ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಪಕ್ಷ ಸೇರ್ಪಡೆ

ಬೆಂಗಳೂರು: ಸಂಸದ ಸಂಗಣ್ಣ ಕರಡಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.
ಲೋಕಸಭಾ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ (ಏಪ್ರಿಲ್‌ 16) ರಾಜಿನಾಮೆ ನೀಡಿದ್ದರು. ಸಂಗಣ್ಣ ಕರಡಿ ಅವರಿಗೆ ಕಾಂಗ್ರೆಸ್‌ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಸೇರ್ಪಡೆಗೊಂಡ ಬಳಿಕ ಮಾತನಾಡಿದ ಸಂಗಣ್ಣ ಕರಡಿ ನಾನು ಕಾಂಗ್ರೆಸ್ ಸೇರಲು ಲಕ್ಷ್ಮಣ ಸವದಿ ಕಾರಣರು. ಅಂದು ಬಿಜೆಪಿ ಸೇರುವುದಕ್ಕೂ ಅವರೇ ಕಾರಣರಾಗಿದ್ದರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರು ನನಗೆ ಗೊತ್ತಿರುವವರು. ಎರಡು ಜಿಲ್ಲೆಗಳ ಅಭಿವೃದ್ಧಿಗಾಗಿ ನಾನು ಪಕ್ಷ ಸೇರ್ಪಡೆ ಆಗುತ್ತಿದ್ದೇನೆ. ರಾಜಶೇಖರ ಹಿಟ್ನಾಲ್ ಅವರನ್ನು ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಹೊತ್ತಿದ್ದೇನೆ ಎಂದು ಹೇಳಿದರು.

ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್ ಪುಟ್ಟಸ್ವಾಮಿ, ಪತ್ರಕರ್ತೆ ಸ್ವಾತಿ ಚಂದ್ರಶೇಖರ್ ಮತ್ತಿತರರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.