ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಅರವಿಂದ ಲಿಂಬಾವಳಿ
Advertisement

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಬಳಿ ಈ ಘಟನೆ ನಡೆದಿದೆ.
ಮೃತನನ್ನು ಹೆಚ್ ಎಸ್ ಆರ್ ಲೇಔಟ್ ನಿವಾಸಿ ಪ್ರದೀಪ್ (47) ಎಂದು ಗುರುತಿಸಲಾಗಿದೆ. ಈತ ತಲೆಗೆ ಗುಂಡು ಹಾರಿಸಿಕೊಂಡು
ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.