ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ 5 ದಿನ ಪೊಲೀಸ್ ಕಸ್ಟಡಿಗೆ

ಮಾಡಾಳ
Advertisement

ಬೆಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು 5 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಮಾಡಿದೆ.
ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಬಂಧಿಸಿದಂತೆ A1 ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಏಪ್ರಿಲ್ 1ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.