ಬೆಳಗಾವಿ: ಬಿಲ್ ಪಾಸ್ ಮಾಡುವ ಸಲುವಾಗಿ ೧೦ ಸಾವಿರ ರೂ. ಲಂಚ ಪಡೆಯುತ್ತಿದ್ದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಒಬ್ಬರು ರೆಡ್‌ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಖಾನಾಪುರ ತಾಲೂಕಿನಲ್ಲಿ ನಡೆದಿದೆ.
ಖಾನಾಪೂರ ತಾಲೂಕಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ ಡಿ.ಎಂ.ಬನ್ನೂರ ಅವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ. ಎಇಇ ಬನ್ನೂರ ಅವರು ಬಿಲ್ ಪಾಸ್ ಮಾಡುವ ಸಲುವಾಗಿ ಹತ್ತು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ.
ಬೆಳಗಾವಿ ಲೋಕಾಯುಕ್ತ ಡಿಎಸ್‌ಪಿ ಭರತ ರೆಡ್ಡಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಇನ್ಸ್‌ಪೆಕ್ಟರ್ ಉಸ್ಮಾನ್ ಅವಟಿ ಅವರೊಂದಿಗೆ ಇಲಾಖೆಯ ಅಧಿಕಾರಿಗಳು ಇದ್ದರು.
ನಿಲಾವಡೆ ಗ್ರಾಮ ಪಂಚಾಯಿತಿ ಸದಸ್ಯರಿಂದ ೧೦ ಸಾವಿರ ರೂ. ಲಂಚ ಕೇಳಿದ್ದರು. ಈ ಬಗ್ಗೆ ಅವರೇ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ದಾಳಿ ನಡೆಸಲಾಯಿತು.