ಬಿಸಿಯೂಟ ನೌಕರರಿಂದ ವಿಧಾನಸೌಧ ಮುತ್ತಿಗೆ ಯತ್ನ

Advertisement

ಬೆಂಗಳೂರು: ಅರ್ನಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದ ಬಿಸಿಯೂಟ ನೌಕರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೋಯ್ದರು.
ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 13 ರಿಂದ ಫ್ರೀಡಂ ಪಾರ್ಕ್ನಲ್ಲಿ ಬಿಸಿಯೂಟ ನೌಕರರು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೆ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಇಂದು ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಕಾರ್ಯಕರ್ತೆಯರನ್ನು ವಶಕ್ಕೆ ಪಡೆದಿದ್ದಾರೆ.