ಬಿ. ಎಸ್. ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

Advertisement

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಪ್ತ, ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ವಿಧಿವಶರಾದರು.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಪು ಸಿದ್ದಲಿಂಗಸ್ವಾಮಿ, ಮೈಸೂರಿನಲ್ಲಿ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಮೈಸೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೊಡೆ ತಟ್ಟಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ
ಅವರ ವಿರುದ್ಧ ಸೋಲುಂಡಿದ್ದರು. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭ ಸಿದ್ದಲಿಂಗಸ್ವಾಮಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಯಡಿಯೂರಪ್ಪ ಸಂತಾಪ: ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪೋಸ್ಟ್‌ ಮಾಡಿದ್ದು ಮೈಸೂರು ಜಿಲ್ಲೆಯ ಪಕ್ಷದ ಮುಖಂಡ, ಹಲವು ವರ್ಷಗಳ ಕಾಲ ನನ್ನ ಆಪ್ತ ಸಹಾಯಕರಾಗಿದ್ದ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯುೂ ಸೇವೆ ಸಲ್ಲಿಸಿದ್ದ ಶ್ರೀ ಕಾಪು ಸಿದ್ಧಲಿಂಗಸ್ವಾಮಿ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬದ ಸದಸ್ಯರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.