ಬೀದರ್ ಜಿಲ್ಲೆಯಲ್ಲಿ ವಚನ ಸಾಹಿತ್ಯ ವಿವಿ

Advertisement

ಭಾಲ್ಕಿ ಹಿರಿಯ ಶ್ರೀಗಳ ಮನವಿಗೆ ಸಿಎಂ ಸಕರಾತ್ಮಕ ಸ್ಪಂದನೆ

ಬೀದರ್ : ೧೨ನೇ ಶತಮಾನದಲ್ಲಿ ಶರಣರು ಮೆಟ್ಟಿದ ನಾಡು ಬೀದರ್ ಜಿಲ್ಲೆಯಲ್ಲಿ ವಚನ ಸಾಹಿತ್ಯ ವಿಶ್ವವಿದ್ಯಾಲಯ ಆರಂಭಿಸಲು ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಜಿಲ್ಲೆಯ ಬಸವಕಲ್ಯಾಣದಲ್ಲಿ ಗುರುವಾರ ವಿಶ್ವ ಬಸವಧರ್ಮ ಟ್ರಸ್ಟ್ ಅನುಭವ ಮಂಟಪ, ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಹಮ್ಮಿಕೊಂಡ ವಿಶ್ವಗುರು ಬಸವಣ್ಣನವರನ್ನು ಸಾಂಸ್ಕçತಿಕ ನಾಯಕ ಎಂದು ಘೋಷಿಸಿದ್ದರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು. ಇದಕ್ಕೂ ಮುನ್ನ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಮಾತನಾಡಿ ಬೀದರ್ ಜಿಲ್ಲೆಯಲ್ಲಿ ವಚನ ಸಾಹಿತ್ಯ ವಿಶ್ವವಿದ್ಯಾಲಯ ಆರಂಭಿಸುವAತೆ ಮಾಡಿದ ಮನವಿಗೆ ಮುಖ್ಯಮಂತ್ರಿ ಸಕರಾತ್ಮಕವಾಗಿ ಸ್ಪಂದಿಸಿದರು. ಈಗಾಗಲೇ ಜಾರಿಯಲ್ಲಿರುವ ೫ ಗ್ಯಾರಂಟಿ ಯೋಜನೆಗಳು ನಮ್ಮ ಅಧಿಕಾರವಧಿಯ ೫ ವರ್ಷದ ವರೆಗೆ ಮುಂದು ವರೆಯುತ್ತವೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ಸಮ ಸಮಾಜದ ನಿರ್ಮಾಣಕ್ಕೆ ಗ್ಯಾರಂಟಿ ಯೋಜನೆಗಳು ಮುಂದುವರೆಯುವುದು ಅವಶ್ಯಕವಾಗಿದೆ ಎಂದು ಪ್ರತಿಪಾದಿಸಿದರು.