ಬೆಂಗಳೂರಿನ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ

Advertisement

ಬೆಂಗಳೂರ: ಮೂರು ಫೈವ್ ಸ್ಟಾರ್ ಹೋಟೆಲ್​ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.
ಎಲೆಕ್ಟ್ರಾನಿಕ್ ಸಿಟಿ ಬಳಿಯ ಸ್ಟಾರ್​ ಹೋಟೆಲ್​ಗೆ ಬೆದರಿಕೆ ಸಂದೇಶ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್​ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಇದೊಂದು ಹುಸಿಬಾಂಬ್‌ ಬೆದರಿಕೆ ಅನ್ನೋದು ಬಯಲಾಗಿದೆ.