ಬೆಳಗಾವಿ: ಗಡಿನಾಡ ಬೆಳಗಾವಿಯಲ್ಲಿ ಮಕ್ಕಳ ಅಪಹರಣಕಾರರ ಗ್ಯಾಂಗ್ ಸಕ್ರೀಯವಾಗಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಟಿಸಿದೆ.
ನಗರದ ಹಿಂದವಾಡಿ ಪೋಸ್ಟ್ ಆಫೀಸ್ ಬಳಿ ಒಂಭತ್ತು ವರ್ಷದ ಬಾಲಕಿಯನ್ನು ಅಪಹರಿಸಲು ವಿಫಲ ಯತ್ನ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.
ಟ್ಯೂಶನ್ ಗೆಂದು ಹೊರಟಿದ್ದ ಆ ಬಾಲಕಿಗೆ ಚಾಕಲೇಟ್ ಆಮಿಷ ನೀಡಿ ಎತ್ತಿಕೊಂಡು ಹೋಗಲು ಪ್ರಯತ್ನ ನಡೆಸಿದ್ದಾನೆ.
ಆದರೆ ಈ ಸಂದರ್ಭದಲ್ಲಿ ಬಾಲಕಿ ಅತನಿಂದ ಬಿಡಿಸಿಕೊಳ್ಳಲು ಹರಸಾಹಸ ಮಾಡಿದ್ದಾಳೆ. ಅಪಹರಣಕಾರನಿಗೆ ಒಂದೆರಡು ಏಟು ಹೊಡೆದು ಚೀರಾಟ ಸಹ ಮಾಡಿದ್ದಾಳೆ. ಆದರೂ ಆತ ಅವಳನ್ನು ಎತ್ತಿಕೊಂಡು ಹೋಗುತ್ತಿದ್ದಾಗ ಅಲ್ಲಿ ಜನಗುಂಪಾಗಿದ್ದಾರೆ. ಕೊನೆಗೆ ಆತನನ್ನು ಹಿಡಿಯಲು ಬೆನ್ನಟ್ಟಿದಾಗ ಆತ. ಅವಳನ್ನು ಬಿಟ್ಟು ಓಡಿ ಹೋದನು ಎಂದು ಗೊತ್ತಾಗಿದೆ.
ಈ ಬಗ್ಗೆ ಬಾಲಕಿ ತಾಯಿ ಟಿಳಕವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೆಟ್ಟಿ ನೀಡಿದಾಗ ಅಲ್ಲಿರುವ ಸಿಸಿಟಿವಿಯಲ್ಲಿ ಅಪಹರಣಕಾರನು ಬಾಲಕಿಯನ್ನು ಎತ್ತಿಕೊಂಡು ಓಡಿ ಹೋಗುವ ದೃಶ್ಯ ಕಂಡು ಬಂದಿದೆ.
ಬೆಳಗಾವಿ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಪಾಲಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ನಗರದ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬ ಗ್ರಾಮೀಣ ಪ್ರದೇಶದಿಂದ ಬರುವ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಸಹ ನಡೆದಿತ್ತು.