ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ತಾಯಿ ಆತ್ಮಹತ್ಯೆ

ನೀರು
Advertisement

ಬೆಳಗಾವಿ (ಸವದತ್ತಿ): ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತನುಜಾ ಪರಸಪ್ಪ ಗೋಡಿ (32), ಮಕ್ಕಳಾದ ಸುದೀಪ್ (4), ರಾಕಾ (3) ಮೃತ ದುರ್ದೈವಿಗಳು. ಸವದತ್ತಿ ಪೊಲೀಸ್‌ ಠಾಣಾ ವ್ಯಾಪ್ತಿಯ ವಟಾಳ ಗ್ರಾಮದ ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ಮೂವರ ಶವ ಪತ್ತೆಯಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆಯಿಂದ ಇನ್ನಷ್ಟು ವಿವರ ತಿಳಿದುಬರಬೇಕಿದೆ. ಕಳೆದ ರಾತ್ರಿ ಮೂರು ಜನರ ಶವಗಳನ್ನ ಪೊಲೀಸರು ಹೊರ ತೆಗೆದಿದ್ದಾರೆ. ಸವದತ್ತಿ ತಾಲೂಕು ಆಸ್ಪತ್ರೆಗೆ ಶವಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.