ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್

Advertisement

ಕೋಲಾರ(ಬಂಗಾರಪೇಟೆ): ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ರಾಜ್ಯದಲ್ಲಿನ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ಬೆಳ್ಳಂಬೆಳ್ಳಗ್ಗೆ ದಾಳಿ ನಡೆಸಿದ್ದಾರೆ.
ಇತ್ತೀಚೆಗೆ ವರ್ಗಾವಣೆಯಾಗಿದ್ದ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಮನೆ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಎರಡು ದಿನದ ಹಿಂದೆ ವರ್ಗಾವಣೆ ಆಗಿದ್ದ ಬಂಗಾರಪೇಟೆ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ (EO) ಎನ್.ವೆಂಕಟೇಶಪ್ಪ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಂಗಾರಪೇಟೆ ಪಟ್ಟಣದಲ್ಲಿ ಮೂರು ಕಡೆ, ಮುಳಬಾಗಿಲು ತಾಲ್ಲೂಕು ತಿಪ್ಪದೊಡ್ಡಿ ಎರಡು ಕಡೆ ದಾಳಿ ನಡೆಸಿದ್ದಾರೆ. ಒಟ್ಟು ವೆಂಕಟೇಶಪ್ಪಗೆ ಸೇರಿದ ಐದು ಕಡೆ ಏಕಕಾಲಕ್ಕೆ ದಾಳಿ ಮಾಡಿದ್ದು, ಕಳೆದ‌ ಎಂಟು ವರ್ಷಗಳಿಂದ ಬಂಗಾರಪೇಟೆ ತಾಲ್ಲೂಕು ಪಂಚಾಯ್ತಿ ಇಓ ಆಗಿ ವೆಂಕಟೇಶಪ್ಪ ಕೆಲಸ ಮಾಡುತ್ತಿದ್ದರು. ಎರಡು ದಿನಗಳ‌ ಹಿಂದೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆ‌ ಬಾಗೇಪಲ್ಲಿಗೆ ವರ್ಗಾವಣೆಯಾದ್ದ ವೆಂಕಟೇಶಪ್ಪ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲಾತಿಗಳ ಪರಿಶೀಲನೆ ಮುಂದುವರೆಸಿದ್ದಾರೆ.