ಬೆಂಗಳೂರು: ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ಅನ್ನು ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಿ ಸರ್ಕಾರ ವಾಪಸ್ ಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಕಾಂಗ್ರೆಸ್ ಸರ್ಕಾರದ ಆಡಳಿತ ತುಘಲಕ್ ಹಾದಿಯಲ್ಲಿ ನಡೆದಿದೆ, ಹಿಂದೂ ಧರ್ಮಿಯರ ಧಾರ್ಮಿಕ ಕ್ಷೇತ್ರದಲ್ಲಿಯೂ ಆದಾಯ ಗಳಿಕೆಯನ್ನು ಮಾನದಂಡವನ್ನಾಗಿಸಿಕೊಂಡು ಹಿರೇಮಗಳೂರು ಕಣ್ಣನ್ ಅವರಂತಹ ನಾಡಿನ ಶ್ರೇಷ್ಠ ಕನ್ನಡ ವಿದ್ವಾಂಸ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಿಗೆ ನೋಟಿಸ್ ನೀಡಿರುವ ಕ್ರಮ ಅತ್ಯಂತ ಹಾಸ್ಯಾಸ್ಪದ ಹಾಗೂ ಖಂಡನೀಯ. ಹಿಂದೂ ಆಚಾರ-ವಿಚಾರ ಹಾಗೂ ಧಾರ್ಮಿಕ ಕೇಂದ್ರಗಳನ್ನೇ ಗುರಿಯನ್ನಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ಆಗಾಗ ಸರಣೀ ರೂಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಧರ್ಮನಿಷ್ಠರ ಸಹನೆಯನ್ನು ಕೆಣಕುವಂತಿದೆ. ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ಅನ್ನು ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಿ ಸರ್ಕಾರ ವಾಪಸ್ ಪಡೆಯಬೇಕು, ಇಂಥಾ ಅಸಂಬದ್ಧ ನೋಟಿಸ್ ನೀಡಿದ ಅವಿವೇಕಿ ಅಧಿಕಾರಿಯನ್ನು ಕೂಡಲೇ ಅಮಾನತ್ತಿನಲ್ಲಿಡಲಿ ಎಂದಿದ್ದಾರೆ.