ಕುಷ್ಟಗಿ: ಕುಷ್ಟಗಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಾಲೂಕಿನ ಕಲಿಕೇರಿ ಕ್ರಾಸ್ ಹತ್ತಿರ ಬೈಕ್‌ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಮೃತಪಟ್ಟ ಘಟನೆ ಜರುಗಿದೆ. ಮೃತ ದುರ್ದೈವಿ ತಾಲ್ಲೂಕಿನ ಜಾಲಿಹಾಳ ಗ್ರಾಮದ ಪರನಗೌಡ ಪಾಟೀಲ(60) ಎಂದು ಗುರುತಿಸಲಾಗಿದ್ದು ಇವರು ತಾಲೂಕಿನ ದೋಟಿಹಾಳ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಪಿಗ್ಮಿ ಏಜೆಂಟ್‌ರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಎಂದಿನಂತೆ ಕುಷ್ಟಗಿ ಪಟ್ಟಣಕ್ಕೆ ಬಂದು ಪಿಗ್ಮಿ ಹಣವನ್ನು ಸಂಗ್ರಹಿಸಿ ಮರಳಿ ರಾಷ್ಟ್ರೀಯ ಹೆದ್ದಾರಿ ಮೂಲಕ ತನ್ನ ಸ್ವಂತ ಗ್ರಾಮಕ್ಕೆ ತೆರಳುತ್ತಿರುವ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಡಕೊಪ್ಪ ಕ್ರಾಚ್ ನಲ್ಲಿ ಯು ಟರ್ನ್ ತೆಗೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಇಲಕಲ್ ಕಡೆಯಿಂದ ರಭಸವಾಗಿ ಬಂದ ಕಾರು ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಜರುಗಿದೆ ಘಟನಾ ಸ್ಥಳಕ್ಕೆ ಸಿಪಿಐ ನಿಂಗಪ್ಪ ರುದ್ರಪ್ಪಗೋಳ, ಪಿಎಸ್ಐ ಮೌನೇಶ ರಾಥೋಠ,ಎಎಸ್ಐ ಭೀಮಪ್ಪ ತಳವಾರ್ ಭೇಟಿ ನೀಡಿ ಸಮಗ್ರ ಪರಿಶೀಲಿಸಿದ ಬಳಿಕ ಈ ಕುರಿತಂತೆ ಠಾಣೆಯಲ್ಲಿ ಪ್ರಕಟ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.
ಸೋಮವಾರ ಬೆಳಗ್ಗೆ ಕಲಕೇರಿ ಕ್ರಾಸಿನಲ್ಲಿರುವ ರಾಷ್ಟೀಯ ಹೆದ್ದಾರಿಯಲ್ಲಿ ಬೈಕ್ ಮತ್ತು ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ನಂತರ ಅಪಘಾತ ನಡೆದ ಸ್ಥಳಕ್ಕೆ ಹೈವೇ ಮೊಬೈಲ್ ವಾಹನದ ಸಿಬ್ಬಂದಿಗಳು ಆಗಮಿಸಿ ತಕ್ಷಣ ಆಂಬುಲೆನ್ಸ್ ನಲ್ಲಿ ತಾಲೂಕ ಆಸ್ಪತ್ರೆಗೆ ಕಳುಹಿಸಿದ್ದಾರೆ.