ಭಾರತದಲ್ಲಿ ಮುಸ್ಲಿಂರ ಸಂಖ್ಯೆ ವೇಗವಾಗಿ ಹೆಚ್ಚಳ

ಬೊಮ್ಮಾಯಿ
Advertisement

ಹಾವೇರಿ: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ದೂರಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ದೇಶದಿಂದ ಮುಸ್ಲಿಮರನ್ನು ಓಡಿಸಲು ಹುನ್ನಾರ ನಡೆದಿದೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇಡೀ ಜಗತ್ತಿನಲ್ಲಿ ಎಲ್ಲಾದರೂ ಮುಸ್ಲಿಂಮರು ಸುರಕ್ಷತೆಯಿಂದ ಇದ್ದರೆ ಅದು ಭಾರತದಲ್ಲಿ ಮಾತ್ರ. ಇದನ್ನು ಮೊದಲು ಡಿ.ಕೆ. ಶಿವಕುಮಾರ್ ಅರ್ಥ ಮಾಡಿಕೊಳ್ಳಲಿ. ಅವರ ಜನಸಂಖ್ಯೆ ಅತಿ ವೇಗವಾಗಿ ಬೆಳೆಯುತ್ತಿರುವುದು ಭಾರತ ದೇಶದಲ್ಲಿ ಮಾತ್ರ. ಇಸ್ಲಾಂ ದೇಶದಲ್ಲಿ ಇವರ ಜನಸಂಖ್ಯೆ ಕಡಿಮೆ ಆಗುತ್ತಿದೆ. ಡಿ.ಕೆ. ಶಿವಕುಮಾರ್ ಅವರು ಓಟಿನ ರಾಜಕಾರಣಕ್ಕಾಗಿ ತುಷ್ಟಿಕರಣಕ್ಕಾಗಿ ಹಾಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು.
ಇನ್ನು ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಮಾಡ್ತಿದೆ ಎಂಬ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿದ ಬಸವರಾಜ ಬೊಮ್ಮಾಯಿ, ನೇಹಾ ಸಾವಿಗೆ ಕಾರಣ ಯಾರು.? ಸಾವಿಗೆ ಕಾರಣವಾದ ವ್ಯವಸ್ಥೆ ಯಾವುದು? ಹಾಡುಹಗಲೇ ಕಾಲೇಜು ಕ್ಯಾಂಪಸ್‌ನಲ್ಲಿ ೯ ಬಾರಿ ಇರಿದು ವಿದ್ಯಾರ್ಥಿನಿ ಕೊಲೆ ಮಾಡಿದ್ದಾನೆ. ಇಂಥ ವಾತಾವರಣ ಉಂಟಾಗಲು ಕಾರಣ ಯಾರು? ಅವರಿಗೆ ಕಾನೂನಿನ ಭಯ ಇಲ್ಲ, ಪೊಲೀಸರ ಭಯವಿಲ್ಲ, ಶಿಕ್ಷೆಯ ಭಯಾವೂ ಇಲ್ಲ. ಅವರಿಗೆ ಸರ್ಕಾರದ ರಕ್ಷಣೆ ಇದೆ. ಅದಕ್ಕೆ ಇಂಥ ಘಟನೆ ನಡೆದಿವೆ. ವಿದ್ಯಾರ್ಥಿನಿ ಕೊಲೆ ಆದರೂ ಪ್ರತಿಭಟನೆ ಮಾಡಬಾರದು ಎಂದರೆ ಇದು ಸರ್ಕಾರದ ಸರ್ವಾಧಿಕಾರಿ ಮಾನಸಿಕತೆ. ಸರ್ವಾಧಿಕಾರಿ ಮಾನಸಿಕತೆಯಿಂದ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.