ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸಲು ಖರ್ಗೆ ಆಗ್ರಹ

Mallikarjun Karge
Advertisement

ನವದೆಹಲಿ: ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪತ್ರ ಬರೆದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಜಮ್ಮು ಮತ್ತು ಕಾಶ್ಮೀರದ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಕೋರಿದೆ, ಭದ್ರತಾ ಲೋಪದ ಹಿನ್ನೆಲೆಯಲ್ಲಿ ಶುಕ್ರವಾರದಂದು ಒಂದು ದಿನದ ಮಟ್ಟಿಗೆ ಭಾರತ್ ಜೋಡೊ ಯಾತ್ರೆಯನ್ನು ರದ್ದು ಮಾಡಲಾಗಿತ್ತು.
ಮುಂದಿನ ಎರಡು ದಿನಗಳಲ್ಲಿ ಹಾಗೂ ಜನವರಿ 30ರಂದು ಶ್ರೀನಗರದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬೃಹತ್ ಸಮಾವೇಶಕ್ಕೆ ಭಾರಿ ಜನಸಂದಣಿಯನ್ನು ನಿರೀಕ್ಷಿಸುತ್ತಿದ್ದೇವೆ. ಕಾಂಗ್ರೆಸ್ ಮತ್ತು ಇತರೆ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುತ್ತಿದ್ದು, ಈ ಸಂದರ್ಭದಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. 2022 ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆ ಜನವರಿ 30ರಂದು ಶ್ರೀನಗರದಲ್ಲಿ ಅಂತ್ಯಗೊಳ್ಳಲಿದೆ.