ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ಯಾತ್ರೆ ಕಾಶ್ಮೀರ ತಲುಪಿದ್ದು, ಶ್ರೀನಗರದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲು ಆಗುತ್ತಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ಹೆಚ್.ಡಿ. ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿಸಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ನಾನು ಈ ಕಾರ್ಯಕ್ರಮಕ್ಕೆ ಹಾಜರಾಗಲು ಆಗುತ್ತಿಲ್ಲ. ರಾಹುಲ್ ಗಾಂಧಿ ಅವರಿಗೆ ಶುಭಾಷಯ ಕೋರುತ್ತೇನೆ ಎಂದಿದ್ದಾರೆ.
ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇವೇಗೌಡರನ್ನು ಆಹ್ವಾನಿಸಿದ್ದರು.