ಭಾಷಣ ತಿರಸ್ಕರಿಸಿ ಹೊರ ನಡೆದ ರಾಜ್ಯಪಾಲರು

Advertisement

ತಮಿಳನಾಡು: ರಾಜ್ಯಪಾಲ ಅವರು ಭಾಷಣದ ಪ್ರಾರಂಭ ಮತ್ತು ಕೊನೆಯಲ್ಲಿ ರಾಷ್ಟ್ರಗೀತೆಯನ್ನು ನುಡಿಸುವ ಮೂಲಕ ಗೌರವವನ್ನು ತೋರಿಸಲು ರಾಜ್ಯ ಸರ್ಕಾರಕ್ಕೆ ಪದೇ ಪದೇ ಮಾಡಿದ ಮನವಿ ಮತ್ತು ಸಲಹೆಯನ್ನು ಕಡೆಗಣಿಸಲಾಗಿದೆ ಎಂದು ನಿರಾಶೆ ವ್ಯಕ್ತಪಡಿಸಿ, ನನಗೆ ಭಾಷಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿ ತಮಿಳುನಾಡು ವಿಧಾನಸಭೆಯಿಂದ ಹೊರನಡೆದಿದ್ದಾರೆ. ತಮಿಳುನಾಡು ಸರ್ಕಾರ ತಮಗಾಗಿ ಸಿದ್ಧಪಡಿಸಿರುವ ಭಾಷಣದಲ್ಲಿ ಮಾಡಿರುವ ಕೆಲವು ಟೀಕೆಗಳನ್ನು ಒಪ್ಪುವುದಿಲ್ಲ ಎಂದು ಹೇಳುತ್ತಾ ಭಾಷಣ ಮುಗಿಸಿದರು. ಕೆಲವೇ ನಿಮಿಷಗಳಲ್ಲಿ ರಾಜ್ಯಪಾಲರು ಭಾಷಣ ಮುಗಿಸಿದ್ದಾರೆ.