ಅಭಿವೃದ್ಧಿ ಹೆಸರಲ್ಲಿ ಸುಳ್ಳಿನ ಕಹಳೆ ಊದುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರ ನೀಡುತ್ತೀರಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮಾತು ಏನಾಯಿತು? ಉದ್ಯೋಗ ಸೃಷ್ಟಿ ಬಗ್ಗೆ ನೀವು ನೀಡಿದ್ದ ಭರವಸೆ ಏನಾಯಿತು? ಪರಿಶಿಷ್ಟ ಜಾತಿ-ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತೇವೆ ಎಂದಿದ್ದ 4,500 ಕೋಟಿ ಹಣ ಎಲ್ಲಿದೆ? 2018ರಲ್ಲಿ ನೀಡಿದ ಪ್ರಣಾಳಿಕೆಯಲ್ಲಿ ಒಂದಾದರೂ ನಿಜವಾಗಿಸಿದ್ದೀರಾ. ನಾಡು-ನುಡಿಗಾಗಿ ಬಿಜೆಪಿ ಕೊಡುಗೆ ಶೂನ್ಯ. ಭ್ರಷ್ಟಾಚಾರದಲ್ಲಿ ಕರ್ನಾಟಕ ಇಂದು ದೇಶಕ್ಕೇ ರಾಜಧಾನಿಯಾಗಿದೆ. ಇದರ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಇನ್ಮುಂದೆ ನಾವು ನಿರಂತರವಾಗಿ ಪ್ರಶ್ನೆ ಕೇಳುತ್ತೇವೆ. ನೈತಿಕತೆ ಇದ್ದರೆ ಉತ್ತರಿಸಿ ಎಂದು ಸವಾಲು ಹಾಕಿದ್ದಾರೆ.