ಭ್ರಷ್ಟಾಚಾರ ಆರೋಪ ಡೈವರ್ಟ್‌ ಮಾಡಲು ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌-ಡಿಕೆಶಿ ಆರೋಪ

Advertisement

ಬೆಂಗಳೂರು: ಯಾವ ತನಿಖೆಯನ್ನೂ ನಡೆಸದೇ ಉಗ್ರ ಪಟ್ಟ ಕಟ್ಟುವುದು ಎಷ್ಟು ಸರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಗುರುವಾರ ಪ್ರೆಸ್‌ ಕ್ಲಬ್‌ನಲ್ಲಿ ಮಾಧ್ಯಮ ಸಂವಾದದ ವೇಳೆ ಮಾತನಾಡಿದ ಅವರು, ವೋಟರ್‌ ಐಡಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್‌ ಮಾಡಲು ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಮಾಡಿಸಿದೆ ಎಂದು ಗಂಭೀರ ಆರೋಪ ಮಾಡಿದರು.
ತನಿಖೆ ನಡೆಸದೇ ಇದು ಉಗ್ರ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಷ್ಟು ಸ್ಪೀಡ್ ಆಗಿ ಹೇಗೆ ಟ್ವೀಟ್ ಮಾಡಿದ್ರು ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ.