ಮಂಗಳೂರು: ಗ್ಯಾರೇಜ್ ನಲ್ಲಿ ಅಗ್ನಿ ಅನಾಹುತ : ಬಸ್ ಸಹಿತ ಅನೇಕ ವಾಹನಗಳು ಬೆಂಕಿಗೆ ಆಹುತಿ

Advertisement

ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ-66ರ ಜಪ್ಪಿನಮೊಗರಿನ ಗ್ಯಾರೇಜ್‌ವೊಂದರಲ್ಲಿ ಶುಕ್ರವಾರ ರಾತ್ರಿ ಆಕಸ್ಮಿಕ ಬೆಂಕಿ‌ ಅವಘಡ ಸಂಭವಿಸಿದೆ. ಇದರಿಂದ ಗ್ಯಾರೇಜ್‌ನ ಮುಂದೆ ದುರಸ್ತಿಗಾಗಿ ನಿಲ್ಲಿಸಲಾಗಿದ್ದ ಬಸ್ ಮತ್ತಿತರ ಕೆಲವು ವಾಹನಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ರಾತ್ರಿ‌ 10ಗಂಟೆ ಸುಮಾರಿಗೆ
ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ಸಾರ್ವಜನಿಕರ ಸಹಕಾರದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ