ಮಂಡ್ಯ: ಮಂಡ್ಯ ಜಿಲ್ಲೆಯನ್ನು ದೇಶದಲ್ಲಿಯೇ ನಂಬರ್ ಒನ್ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‍ವೇ, 8479 ಕೋಟಿ ರೂ. ವೆಚ್ಚದ 118 ಕಿಮೀ. ಉದ್ದ ಮೈಸೂರು-ಬೆಂಗಳೂರು ದಶಪಥ ರಸ್ತೆ ಲೋಕಾರ್ಪಣೆ ಹಾಗೂ 4128 ಕೋಟಿ ರೂ. ವೆಚ್ಚದ ಮೈಸೂರು-ಕುಶಾಲನಗರ 4 ಪಥಗಳ ಹೆದ್ದಾರಿ ಕಾಮಗಾರಿಯ 4 ಪ್ಯಾಕೇಜ್ ಹಾಗೂ ಷಟ್ಪಥ ಬೆಂಗಳೂರು-ಮೈಸೂರು ವಿಭಾಗ ರಾಷ್ಟ್ರೀಯ ಹೆದ್ದಾರಿ 275ರ 2 ಪ್ಯಾಕೇಜ್‌ಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಭಾಗವಹಿಸಿ ಮಾತನಾಡಿದರು.
ಡಬಲ್ ಇಂಜಿನ್ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ನಿರಂತರವಾಗಿ ಕೆಲಸ ಮಾಡುತ್ತಿದೆ. 100 ಕೋಟಿಗೂ ಹೆಚ್ಚು ಅನುದಾನ ನೀಡಿ, ಮುಚ್ಚಿ ಹೋಗಿದ್ದ ಮಂಡ್ಯದ ಸಕ್ಕರೆ ಕಾರ್ಖಾನೆ ಪುನರಾರಂಭಿಸಿದ್ದು ನಮ್ಮ ಸರ್ಕಾರ. ಈ ವರ್ಷ ಎಥನಾಲ್ ಘಟಕವನ್ನು ಮೈಶುಗರ್ ಕಾರ್ಖಾನೆಯಲ್ಲಿ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.