ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ

Advertisement


ಮಂಗಳೂರು: ಮತ್ತೊಂದು ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ಕೇರಳದ ಮಲಪ್ಪುರಂ ನಿವಾಸಿ ಮೊಹಮ್ಮದ್ ಜಲೀಲ್ (೩೯) ಎಂಬವರ ಮೇಲೆ ಹಲ್ಲೆ ನಡೆದಿದ್ದು, ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಲೀಲ್ ಎಂಬಾತ ಮೂರು ತಿಂಗಳ ಹಿಂದೆ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ರಬ್ಬರ್ ತೋಟವನ್ನು ಗುತ್ತಿಗೆ ಪಡೆದು ಸದ್ಯ ಅಲ್ಲಿಯೇ ವಾಸವಾಗಿದ್ದಾರೆ. ಇವರ ಪರಿಚಯದ ಯುವತಿಯೊಬ್ಬಳು ತಾನು ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದಾಗ ತನಗೆ ವಿಶ್ರಾಂತಿ ಪಡೆಯಲು ರೂಂ ಕೇಳಿಕೊಂಡ ಜಲೀಲ್ ಅಸುಳ್ಯದಲ್ಲಿ ರೂಂ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ವೈಯಕ್ತಿಕ ಕೆಲಸ ನಿಮಿತ್ತ ಸುಳ್ಯ ತಾಲೂಕಿನ ತೊಡಿಕಾನಕ್ಕೆ ತೆರಳಿದ 5 ಜನರ ತಂಡವೊಂದು ಕಾರು ಮತ್ತು ಸ್ಕೂಟರ್‌ನಲ್ಲಿ ಬಂದು ಜಲೀಲ್ ಅವರ ಕಾರನ್ನು ತಡೆದು ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿ ತೆರಳಿದ್ದಾರೆ ಎಂದು ಆರೋಪಿಸಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರ ಮೇಲಿನ ಮೂವರ ಹೆಸರನ್ನು ಲತೀಶ್ ಗುಂಡ್ಯ, ವರ್ಷಿತ್ ಹಾಗೂ ಪುನೀತ್ ಎಂಬುದಾಗಿ ಹೆಸರಿಸಲಾಗಿದೆ. ಸುಳ್ಯ ಪೊಲೀಸ್ ಠಾಣೆ ಅ.ಕ್ರ 87/2023 ಕಲಂ 143, 147, 341, 323, 504, 506, 153(ಂ) ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಮೇಲಿಂದ ಸುಳ್ಯ ಸೊಣಂಗೇರಿ ನಿವಾಸಿ ಪುನೀತ್ ಎಂಬಾತನನ್ನು ಬಂಧಿಸಲಾಗಿದೆ.