ಮನೆಯಿಂದ ಮತದಾನ

ಚುನಾವಣೆ 2023
Advertisement

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು ಚುನಾವಣಾ ಆಯೋಗ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ ಇದೇ ಮೊದಲ ಬಾರಿಗೆ ಮತದಾನ ಮಾಡುವ 18-19 ವಯಸ್ಸಿನ ಮತದಾರರ ಸಂಖ್ಯೆ 9,17,241. ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಕರ್ನಾಟಕದಲ್ಲಿ ಪುರುಷ ಮತದಾರರು 2,62,42,561 ಇದ್ದು, 2,59,26,319 ಮಹಿಳಾ ಮತದಾರರು ಇದ್ದಾರೆ. ಇನ್ನು ಕರ್ನಾಟಕದಲ್ಲಿ 4,699 ತೃತೀಯ ಲಿಂಗಿಗಳು ಮತದಾರರು ಇದ್ದು, 12.15 ಲಕ್ಷ ಯುವ ಮತದಾರರು ಇದ್ದಾರೆ. ಒಟ್ಟು 58,282 ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತದೆ. ಒಂದೊಂದು ಮತಗಟ್ಟೆಗೆ 883 ಮತದಾರರು ಮತದಾನ ಮಾಡಲಿದ್ದಾರೆ. ಕೆಲವೇ ಕ್ಷಣಗಳಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.