ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರ ಫಲಿತಾಂಶ ಪ್ರಕಟವಾಗಿದ್ದು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ನೀಡಿದೆ.
ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವನ್ನು ಕಲ್ಪಿಸಲಾಗಿದ್ದು. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ. ಸ್ಕ್ಯಾನ್ಡ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ ಆಗಿರುತ್ತದೆ.
ಜಾಲತಾಣ: karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
ಸಹಾಯವಾಣಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಸಹಾಯವಾಣಿ ಸಂಖ್ಯೆ 080- 23310075 ಅಥವಾ 080- 23310076