ಮಳೆ ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ: ಸಿಎಂ

ಬೊಮ್ಮಾಯಿ
Advertisement

ಬೆಂಗಳೂರು: ಮಳೆ ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆ, ಪ್ರವಾಹದ ವಿಷಯದಲ್ಲಿ ರಾಜಕೀಯವಾಗುತ್ತಿರುವುದು ದುರ್ದೈವದ ಸಂಗತಿ. ಮಳೆ ತಂದಿರುವ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ಯುದ್ಧೋಪಾದಿಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮಳೆ ಯಾವ ಪಕ್ಷವನ್ನೂ ನೋಡಿ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಎಲ್ಲ ಕೆರೆಗಳೂ ತುಂಬಿದ್ದು, ದಾಖಲೆಯ ಮಳೆಯಾಗಿದೆ. ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರದಲ್ಲಿ ಹೆಚ್ಚು ಮಳೆಯಾಗಿದೆ. ಬೆಂಗಳೂರಿನಲ್ಲಿ ಕೆರೆಗಳೆಲ್ಲಾ ತುಂಬಿ ಹರಿಯುತ್ತಿದೆ. ಜಲಪ್ರವಾಹದ ವಿರುದ್ಧ ನಾವು ಸಮರ ಸಾರಿದ್ದೇವೆ. ಈ ಸವಾಲನ್ನು ಒಗ್ಗಟ್ಟಾಗಿ ಎದುರಿಸಬೇಕಾಗಿದೆ. ಈ ವಿಷಯದಲ್ಲಿ ರಾಜಕೀಯ ಮಾಡುವುದು ಸಣ್ಣ ಪ್ರವೃತ್ತಿಯಾಗಿದೆ ಎಂದರು.