ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಕೆಎಸ್ಆರ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪ್ರಕಟಣೆ ಹೊರಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು ಎಂದು ತಿಳಿಸಿದೆ.