ಕೂಡ್ಲಿಗಿ: ತಾಲೂಕಿನ ನರಸಿಂಹಗಿರಿಯ ಮಾಜಿ ಶಾಸಕ ಎನ್.ಟಿ. ಬೊಮ್ಮಣ್ಣ(೭೮) ತುಮಕೂರಿನ ಸಿದ್ಧಗಂಗೆಯ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ ಕೊನೆಯುಸಿರೆಳೆದರು. ೧೯೪೪ರಲ್ಲಿ ಜನಿಸಿದ ಇವರ ತಂದೆ ತಮ್ಮಣ್ಣ, ತಾಯಿ ಬೊರಮ್ಮನವರು. ತಾಲೂಕು ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾಗಿ ರಾಜಕೀಯಕ್ಕೆ ಪದಾರ್ಪಣೆ ಮಾಡಿ, ಕಾಂಗ್ರೆಸ್ ಪಕ್ಷದಿಂದ ೧೯೮೫-೮೯, ೧೯೮೯-೯೪ರ ಅವಧಿಯಲ್ಲಿ ೨ ಬಾರಿ ವಿಧಾನಸಭಾ ಸದಸ್ಯರಾಗಿದ್ದರು.
೧೯೯೯ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡರು. ನಂತರ ಪಕ್ಷೇತರ ಅಭ್ಯಾರ್ಥಿಯಾಗಿ ಕಣಕ್ಕಿಳಿದಿದ್ದರೂ, ನಂತರ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡು ಈ ಪಕ್ಷದ ಅಭ್ಯರ್ಥಿಯಾಗಿ ಪರಾಭವಗೊಂಡರು. ರಾಜಕೀಯ ಲೆಕ್ಕಾಚಾರ ಹೇಗೆ ಇರಲಿ ಇಂದಿಗೂ ಅವರಿಗೆ ಪಕ್ಷಾತೀತವಾಗಿ ಎಲ್ಲರೂ ಗೌರವದಿಂದ ಕಾಣುತ್ತಿದ್ದರು. ಇವರಿಗೆ ಮೂವರು ಪುತ್ರಿಯರು, ಇಬ್ಬರು ಪುತ್ರರಲ್ಲಿ ಡಾ. ಶ್ರೀನಿವಾಸ, ನೇತ್ರ ತಜ್ಞರಾಗಿದ್ದಾರೆ.