ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರಿಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ವಯೋಸಹಜ ಆನಾರೋಗ್ಯದಿಂದ ದಾಖಲಾಗಿರುವ ಅವರು ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಎಚ್‍ಎಎಲ್ ವಿಮಾನ ನಿಲ್ದಾಣ ಸಮೀಪದಲ್ಲಿರುವ ಮಣಿಪಾಲ್ ಆಸ್ಪತ್ರೆಯ ಐಸಿಯು ಘಟಕದಲ್ಲಿ 91 ವರ್ಷದ ಎಸ್.ಎಂ.ಕೃಷ್ಣ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು. ಎಸ್.ಎಂ.ಕೃಷ್ಣ ಅವರಿಗೆ ಡಾ.ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನಿಡುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.