ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಿಹಿ ಸುದ್ದಿಯ ನಡುವೆ ಕಹಿ ಸುದ್ದಿಯೊಂದು ಬಂದೆರಗಿದೆ. ಸಿದ್ದರಾಮಯ್ಯ ಅವರ ಬಾವ ಇಂದು ನಿಧನರಾಗಿದ್ದಾರೆ. ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಅವರ ಪತಿ ರಾಮೇಗೌಡ ಅವರು ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದಾರೆ.
ರಾಮೇಗೌಡ ಅವರಿಗೆ 69 ವರ್ಷ ವಯಸ್ಸಾಗಿತ್ತು. ಅನಾರೋಗ್ಯ ಹಿನ್ನೆಲೆಯಲ್ಲಿ ರಾಮೇಗೌಡರನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ಶನಿವಾರ ಬೆಳಿಗ್ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರಾಮೇಗೌಡ ಅವರು ಮೃತಪಟ್ಟಿದ್ದಾರೆ. ಮೃತರು ಸಿದ್ದರಾಮನಹುಂಡಿಯಲ್ಲಿ ನ್ಯಾಯಬೆಲೆ ಅಂಗಡಿಯನ್ನು ನಡೆಸುತ್ತಿದ್ದರು. ಅವರ ನಿಧನದಿಂದ ಸಿದ್ದರಾಮಯ್ಯ ಕುಟುಂದ ದುಃಖ ಸಾಗರದಲ್ಲಿ ಮುಳುಗಿದೆ. ಶನಿವಾರ ಮಧ್ಯಾಹ್ನ ರಾಮೇಗೌಡ ಅವರ ಅಂತಿಮ ಕ್ರಿಯೆ ನೇರವೇರಲಿದೆ.