ಮಾಜಿ, ಹಾಲಿ ಶಾಸಕರಿಗೆ ಪಕ್ಷೇತರ ಅಭ್ಯರ್ಥಿ ಸವಾಲು

ಶ್ರೀರಂಗಪಟ್ಟಣ
Advertisement

ಶ್ರೀರಂಗಪಟ್ಟಣ: ಜೆಡಿಎಸ್ ಟಿಕೆಟ್ ಸಿಗದಿದ್ದಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ತಗ್ಗಳ್ಳಿ ವೆಂಕಟೇಶ್ ತಮ್ಮ ಬೆಂಬಲಿಗರೊಂದಿಗೆ ಗುರುವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಹಾಲಿ‌ ಹಾಗೂ ಮಾಜಿ ಶಾಸಕರ ವಿರುದ್ಧ ಹರಿಹಾಯ್ದರು. ಕ್ಷೇತ್ರದ ಜನತೆ ಬದಲಾವಣೆ ಬಯಸುತ್ತಿದ್ದು, ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕೆ ದುಡಿದಿರುವ ನನಗೆ ಪಕ್ಷ ಅನ್ಯಾಯ ಮಾಡಿದೆ. ನಾನು ಯಾವುದೇ ಅಕ್ರಮ ಆಸ್ತಿ ಸಂಪಾದಿಸಿಲ್ಲ. ಹಾಲಿ, ಮಾಜಿ ಶಾಸಕರು ಅಕ್ರಮ ಆಸ್ತಿಗಳಿಸಿಲ್ಲ ಎಂದರೆ ಬಹಿರಂಗ ಸವಾಲಿಗೆ ಬರುವಂತೆಯೂ ತಗ್ಗಳ್ಳಿ ವೆಂಕಟೇಶ್ ಸವಾಲು ಹಾಕಿದರು.