ಚಾಮರಾಜನಗರ : ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ನಿರಂತರ ಮಳೆಯಿಂದ ಜಿಲ್ಲೆಯ ಪ್ರೇಕ್ಷಣೀಯ ಪ್ರಮುಖ ಯಾತ್ರ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡು ಎಂಬಲ್ಲಿ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಮುಂಭಾಗ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿತಗೊಂಡಿದೆ. ಪ್ರತಿಮೆ ಸ್ಥಳದಲ್ಲಿ ಈಗಾಗಲೇ ಕಾಮಗಾರಿಗಳು ನಡೆಯುತ್ತಿರುವುದರಿಂದ ಭಕ್ತರ ಪ್ರವೇಶ ನಿಷೇಧ ಮಾಡಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನೆರಡು ದಿನಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುವುದು ಎಂದು ಪ್ರಾಧಿಕಾರದ ಮಾಹಿತಿ ನೀಡಿದೆ.