ಮಾರ್ಚ್‌ 1ರಿಂದ ಸರಕಾರಿ ನೌಕರರ ಮುಷ್ಕರ

ಷಡಕ್ಷರಿ
Advertisement

ಶಿವಮೊಗ್ಗ: ಮಾರ್ಚ್​ 1ರಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿವರೆಗೆ ಮುಷ್ಕರ ಮಾಡಲು ನಿರ್ಧರಿಸಿರುವುದಾಗಿ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಹೇಳಿದ್ದಾರೆ. ರಾಜ್ಯದ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದರು.
ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆ, ಕಾಲೇಜು, ಆಸ್ಪತ್ರೆ, ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲ ರಾಜ್ಯ ಸರಕಾರಿ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಹೋರಾಟ ಮಾಡಲಿದ್ದಾರೆ ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗ ಜಾರಿ ಹಾಗೂ ಎನ್​ಪಿಎಸ್​ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿ ಮಾಡಬೇಕೆಂಬ ಬೇಡಿಕೆಯನ್ನಿಟ್ಟುಕೊಂಡ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.