ಮಾರ್ಚ್ 3ರಂದು ಬಸವಕಲ್ಯಾಣಕ್ಕೆ ಅಮಿತ್ ಶಾ ಪ್ರವಾಸ

Advertisement

ಬೀದರ್​ : ಚುನಾವಣೆಯ ಚಾಣಕ್ಯ ಎಂದೇ ಖ್ಯಾತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 3ರಂದು ಬೀದರ್​ ಜಿಲ್ಲೆಗೆ ಆಗಮಿಸಲಿದ್ದು, ಬಸವಕಲ್ಯಾಣದ ಅನುಭವ ಮಂಟಪದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ವಿಜಯ ಸಂಕಲ್ಪ ಯಾತ್ರೆಯ ಜಿಲ್ಲಾ ಸಂಚಾಲಕರೂ ಆದ ಪಶು ಸಂಗೋಪನೆ ಸಚಿವ ಪ್ರಭು ಬಿ ಚೌಹಾಣ್​ ತಿಳಿಸಿದರು.ನಗರದ ಭಾರತೀಯ ಜನತಾ ಪಕ್ಷದ ಜಿಲ್ಲಾ‌ ಕಾರ್ಯಾಲಯದಲ್ಲಿ ಫೆಬ್ರವರಿ 26ರಂದು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿ, ಮಾರ್ಚ್ 3ರ ಬೆಳಗ್ಗೆ 11 ಗಂಟೆಗೆ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಅಮಿಶ್ ಶಾ ಅವರ ಅಮೃತ ಹಸ್ತದಿಂದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಸಿಗಲಿದೆ. ಬಳಿಕ ಮಧ್ಯಾಹ್ನ 12ಕ್ಕೆ‌ ಬಸವೇಶ್ವರ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಹೇಳಿದರು.