ಮುಂಬೈ ಅಗ್ನಿ ಅವಘಡ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

Advertisement

ಮುಂಬೈ: ಗೋರೆಗಾಂವ್‌ನ ಕಟ್ಟಡವೊಂದರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದುವರೆಗೆ 7 ಜನರು ಸಾವನ್ನಪ್ಪಿದ್ದಾರೆ.
ಏಳು ಮಹಡಿಯ ಕಟ್ಟಡದಲ್ಲಿ ಶುಕ್ರವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಆರು ಮಂದಿ ಜೀವಂತವಾಗಿ ಸುಟ್ಟು ಹೋಗಿರುವ ಹೃದಯವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಪ್ರಧಾನಮಂತ್ರಿ ಕಛೇರಿಯಿಂದ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಮುಂಬೈನ ಗೋರೆಗಾಂವ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಪ್ರಾಣಹಾನಿಯಾಗಿರುವುದು ನೋವು ತಂದಿದೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸಿ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರತಿ ಮೃತರ ಮುಂದಿನ ಸಂಬಂಧಿಕರಿಗೆ ನೀಡಲಾಗುತ್ತದೆ. ಗಾಯಾಳುಗಳಿಗೆ ರೂ.50,000 ನೀಡಲಾಗುವುದು ಎಂದಿದ್ದಾರೆ.