ಲಕ್ನೋ: ಸತತ 3ನೇ ಬಾರಿಗೆ ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇದಕ್ಕೂ ಮುನ್ನ ವಾರಾಣಸಿಯಲ್ಲಿ ಗಂಗಾ ಪೂಜೆ ನೆರವೇರಿಸಿದರು. ನಂತರ ವಾರಣಾಸಿ ಕಾಲಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಮೂರನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದರು.
ಇಂದು ಗಂಗಾ ಸಪ್ತಮಿ: ಗಂಗಾ ಸಪ್ತಮಿಯಂದು ಶುಭ ಅಭಿಜಿನ್ ಲಗ್ನದಲ್ಲಿ ಮೋದಿ ನಾಮಪತ್ರ ಸಲ್ಲಿಸುವುದು ಶ್ರೇಯಸ್ಕರ ಎಂದು ಪಂಡಿತ್ ಗಣೇಶ್ವರ್ ಶಾಸ್ತ್ರಿ ಸೂಚಿಸಿದ ಹಿನ್ನೆಲೆಯಲ್ಲಿ ಇಂದು ಮೋದಿ ನಾಮಪತ್ರ ಸಲ್ಲಿಕೆ ಮಾಡಿದರು.ಇಂದು ಹಿಂದೂಗಳ ಪಾಲಿಗೆ ಪವಿತ್ರವಾದ ದಿನವಾಗಿದೆ. ಗಂಗೆ ಜನಿಸಿದಳು ಎಂಬ ನಂಬಿಕೆಯಿದೆ
ಸತತ 3ನೇ ಬಾರಿಗೆ: ವಾರಾಣಸಿಯಲ್ಲಿ ಜೂ.1ರಂದು ಕಡೆಯ ಹಂತದಲ್ಲಿ ಮತದಾನ ನಡೆಯಲಿದ್ದು, ಜೂ.4ರಂದು ಫಲಿತಾಂಶ ಹೊರಬರಲಿದೆ. ಮೋದಿ ಅವರು 2014 ಮತ್ತು 2019ರಲ್ಲಿ 2 ಬಾರಿ ಇಲ್ಲಿಂದ ಗೆದ್ದು ಸತತ 3ನೇ ಬಾರಿಗೆ ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ