ಮೃತ್ಯುಂಜಯ ಸ್ವಾಮೀಜಿಗೆ ಬೆದರಿಕೆ: ಭದ್ರತೆಗೆ ಸಿಎಂ ಆದೇಶ

CM
Advertisement

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2A ಮಿಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸಿದ್ದ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಧಮ್ಕಿ ಹಾಕಿ ಬೆದರಿಕೆಯೊಡ್ದುತ್ತಿದ್ದಾರೆ ಎಂದು ಎಂದು ಶಾಸಕ ಅರವಿಂದ್ ಬೆಲ್ಲದ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಹೋರಾಟದಲ್ಲಿ ಭಾಗಿಯಾಗಿದ್ದ ಕೆಲ ರಾಜಕೀಯ ನಾಯಕರೇ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಈ ರೀತಿ ಧಮ್ಕಿ ಹಾಕಿದ್ದು ಯಾರು ಎಂಬುದು ನಮ್ಮ ಇಡೀ ಸಮುದಾಯಕ್ಕೆ ಗೊತ್ತಿದೆ. ಮತ್ತೆ ಧಮ್ಕಿ ಹಾಕಿದರೆ ಏನು ಮಾಡಬೇಕು ಎಂಬುದೂ ನಮಗೆ ಗೊತ್ತಿದೆ ಎಂದು ಎಚ್ಚರಿಸಿದ್ದಾರೆ. ನಾವು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಿವ ಮೂಲಕ ಮೂಗಿಗೆ ತುಪ್ಪ ಸವರಿಲ್ಲ, ಈ ರೀತಿ ಕಾಂಗ್ರೆಸ್ ನಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಹೋರಾಟದಲ್ಲಿ ಭಾಗಿಯಾಗಿದ್ದ ಕೆಲ ನಾಯಕರೇ ಇಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಪರೋಕ್ಷವಾಗಿ ವಿಜಯಾನಂದ ಕಾಶಪ್ಪನವರ್ ಹಾಗೂ ವಿನಯ್ ಕುಲ್ಕರ್ಣಿ ವಿರುದ್ಧ ಬೆಲ್ಲದ್ ಆರೋಪ ಮಾಡಿದ್ದಾರೆ.
ಭದ್ರತೆಗೆ ಸಿಎಂ ಆದೇಶ: ಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ಶಾಸಕ ಅವರವಿಂದ ಬೆಲ್ಲದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಸ್ವಾಮೀಜಿಗೆ ಭದ್ರತೆ ಕೊಡಲು ಮನವಿ ಮಾಡಿದ ಈ ಹಿನ್ನೆಲೆಯಲ್ಲಿ ಕೂಡಲೇ ಜಯಮೃತ್ಯುಂಜಯ ಸ್ವಾಮೀಜಿಗೆ ಭದ್ರತೆಯನ್ನು ಕೊಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ.